Menu

ಬೆಳಗಾವಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

train

ಬೆಳಗಾವಿ: ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ಮುಂಜಾನೆ ನಗರದ ರೈಲು ನಿಲ್ದಾಣದ ಬಳಿ ಸಂಭವಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

ಬೆಳಗಾವಿ ರೈಲು ನಿಲ್ದಾಣದಿಂದ ಅರ್ಧ ಕಿಮೀ ದೂರದಲ್ಲಿ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಗೂಡ್ಸ್ ರೈಲು ಹಳಿ ತಪ್ಪಿದೆ. ಈ ವೇಳೆ ಹಳಿ ತಪ್ಪಿ ಮೂರು ಬೋಗಿಗಳು ಪಕ್ಕಕ್ಕೆ ಸರಿದಿವೆ.

ಸ್ಥಳಕ್ಕೆ ರೇಲ್ವೇ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯಾವ ಕಾರಣಕ್ಕೆ ಹಳಿ ತಪ್ಪಿದೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *