ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು. ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾ ಕುಟುಂಬಸ್ಥರು ಆರೋಪಿಸಿದ್ದಾರೆ. ಅತ್ತೆ, ಮಾವ, ಬಾವ ಒಟ್ಟಾಗಿ ಆಕೆಗೆ ನೇಣು ಹಾಕಿರುವುದಾಗಿ ಕುಟುಂಬಸ್ಥರು ಆರೋಪಿಸಿ, ಬಾವ ವೀರನಗೌಡನಿಗೆ ಥಳಿಸಿದ್ದಾರೆ.
ಪೂಜಾ 4 ತಿಂಗಳ ಹಿಂದೆ ಅಮರೇಶ ಎಂಬವರನ್ನು ಮದುವೆಯಾಗಿದ್ದರು. ಅಮರೇಶ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರವಷ್ಟೇ ಚೆನ್ನೈಗೆ ಕೆಲಸಕ್ಕೆ ತೆರಳಿದ್ದರು. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.