ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಈ ವಾರಾಂತ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಧಾನಿ ಮೋದಿ ಏ.19 ಕ್ಕೆ ನಿಗದಿಯಾಗಿದ್ದ ಜಮ್ಮು-ಕಾಶ್ಮೀರ ಪ್ರವಾಸ ರದ್ದು ಮಾಡಿದ್ದಾರೆ. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬಿಹಾರ ಚುನಾವಣೆ ಸನಿಹವೇ ಸಂಪುಟದಲ್ಲಿ ಬದಲಾವಣೆ ಸುದ್ದಿ ಹರಿದಾಡುತ್ತಿದ್ದು, ಇದನ್ನು ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಹಾರ ವಿಧಾನಸಭೆಯ ಎಲ್ಲಾ 243 ಕ್ಷೇತ್ರಗಳಿಗೆ ಚುನಾವಣೆ 2025 ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆಯಿದ್ದರೆ, ಪಶ್ಚಿಮ ಬಂಗಾಳ, ತಮಿಳುನಾಡು ವಿಧಾನಸಭೆಯ ಎಲ್ಲಾ 234 ಸ್ಥಾನಗಳಿಗೆ 2026 ರ ಏಪ್ರಿಲ್-ಮೇನಲ್ಲಿ ಚುನಾವಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.