ಮಂಡ್ಯ: ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಗ್ರಾಮದ ಬಳಿ ಗುರುವಾರ ನಡೆದಿದೆ.
ಹೊಳೆನರಸೀಪುರ ತಾಲೂಕಿನ ಬಿದರಕ ಗ್ರಾಮದ ನಾಗರಾಜು (45) ಹಾಗೂ ಅವರ ಶ್ವೇತಾ (38)ಮೃತಪಟ್ಟವರು.
ಕೆ.ಆರ್.ಪೇಟೆ ತಾಲೂಕಿನ ಗದ್ದೇಹೊಸೂರು ಗ್ರಾಮದ ಶ್ವೇತಾರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿದರಕ, ಗ್ರಾಮದ ನಾಗರಾಜುಗೆ ಮದುವೆ ಮಾಡಿಕೊಡಲಾಗಿತ್ತು.
ಇಬ್ಬರೂ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಗ್ರಾಮದಲ್ಲಿ ಜಾತ್ರೆ ಇದ್ದ ಕಾರಣ ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಕದಬಹಳ್ಳಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋಗಿದ್ದು, ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ನಾಗಮಂಗಲ ತಾಲೂಕಿನ ಬಿಂಡಿಗನ ನವಿಲೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸವಾರ ಸಾವು:
ಬೆಂಗಳೂರಿನ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಡಿಮೆ ಗುಣಮಟ್ಟದ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಮೃತಪಟ್ಟಿರುವ ದುರ್ಘಟನೆ ಗುರುವಾರ ಮುಂಜಾನೆ ನಡೆದಿದೆ.
ಆಡುಗೋಡಿಯ ರಾಜೇಂದ್ರನಗರದ
ಮನೋಜ್ ಕುಮಾರ್(42)ಮೃತಪಟ್ಟವರು, ಮುಂಜಾನೆ 4.30ರ ವೇಳೆ ವಾರದ ಹಿಂದೆ ಖರೀದಿಸಿದ್ದ ಹೊಸ ಬೈಕ್ ನಲ್ಲಿ ಹೊಸೂರಿಗೆ ಹೋಗಿ ಬರುವಾಗ ಹೊಂಗಸಂದ್ರ ಮೆಟ್ರೋ ಸ್ಟೇಷನ್ ಬಳಿ ಈ ದುರ್ಘಟನೆ ಸಂಭವಿಸಿದೆ. ಮಡಿವಾಳ ಸಂಚಾರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿರುತ್ತಾರೆ.