ಬೆಂಗಳೂರುರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ.
ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ‘ಎಕ್ಸ್ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ʼಎಕ್ಸ್ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗವು ಕೂಡಲೇ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸಂಬಂಧಪಟ್ಟ ಪರವಾನಗಿದಾರರಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್ ಲಿಪ್ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಕ್ರಮಕೈಗೊಳ್ಳಲಾಗಿದೆ.
ಇನ್ನು ಮುಂದೆ ಇಂತಹ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ರಸ್ತೆ ಡಾಂಬರೀಕರಣ:
ಇದೇ ರೀತಿಯಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬರು ಕೂಡ್ಲು-ಹರಳೂರು ರಸ್ತೆ ದುರಸ್ತಿ ಬಗ್ಗೆ ಟ್ವೀಟ್ ಮೂಲಕ ಮನವಿ ಮಾಡಿದ್ದರು. ಈ ಬಗ್ಗೆ ಕೂಡ ಸ್ಪಂದಿಸಿರುವ ಸರ್ಕಾರ, ಕೂಡ್ಲು-ಹರಳೂರು ಮುಖ್ಯರಸ್ತೆ ಬೊಮ್ಮನಹಳ್ಳಿ ವಲಯ ವ್ಯಾಪ್ತಿಗೆ ಒಳಪಡುತ್ತಿದ್ದು, ಈ ರಸ್ತೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 110 ಹಳ್ಳಿಗಳಿಗೆ ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಾಮಗಾರಿ ನಡೆಯುತ್ತಿದೆ.
ಕೂಡ್ಲು-ಹರಳೂರು ಮುಖ್ಯರಸ್ತೆ ಕೂಡ್ಲು ವಾರ್ಡ್ ಆಫೀಸ್ನಿಂದ ಕೆಸಿಡಿಸಿ ಮುಖಾಂತರ ಬಿರ್ಲ್ಲಾ ಸರ್ಕಲ್ ವರೆಗೆ ರಸ್ತೆ ಡಾಂಬರಿಕರಣಕ್ಕಾಗಿ ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಕಾಮಗಾರಿಯನ್ನು ಕೈಗೊಳ್ಳಲು ಗುತ್ತಿಗೆದಾರರಿಗೆ ಆದೇಶ ನೀಡಲಾಗಿದೆ.
ಜಲಮಂಡಳಿ ವತಿಯಿಂದ ಒಳಚರಂಡಿ ಮಾರ್ಗಗಳನ್ನು ಅಳವಡಿಸುತ್ತಿರುವುದರಿಂದ ರಸ್ತೆ ಡಾಂಬರೀಕರಣ ಪೂರ್ಣಗೊಳಿಸಲು ವಿಳಂಬವಾಗುತ್ತಿದೆ. ಹಾಗಾಗಿ ಜಲಮಂಡಳಿ ಕಾಮಗಾರಿ ಪೂರ್ಣಗೊಂಡ ನಂತರ ಕೊಡ್ಲು-ಹರಳೂರು ಮುಖ್ಯರಸ್ತೆ ಡಾಂಬರೀಕರಣಗೊಳಿಸಲಾಗುವುದು ಎಂದು ತಿಳಿಸಲಾಗಿದೆ.