Menu

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್‌

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಿಡದಿ ಮನೆಯಿಂದ ಸದಾಶಿವ ನಗರ ಮನೆಗೆ ಹೊರಟಿದ್ದಾಗ ರಾತ್ರಿ 11 ಗಂಟೆಗೆ ಫೈರಿಂಗ್ ನಡೆದಿದೆ. ಈ ವೇಳೆ ಕಾರಿಗೆ ಅಥವಾ ರಿಕ್ಕಿ ರೈಗೆ ಗುಂಡು ತಾಗಿಲ್ಲ. ಶಬ್ದ ಕೇಳಿ ಚಾಲಕ ಬಸವರಾಜು ಕೆಳಗೆ ಇಳಿದು ನೋಡಿ, ಬಳಿಕ ಪರ್ಸ್‌ ಮರೆತು ಬಂದಿರುವುದಾಗಿ ರಿಕ್ಕಿಗೆ ತಿಳಿಸಿ ಮತ್ತೆ ಮನೆಗೆ ಹೋಗಿದ್ದಾರೆ. ಬಳಿಕ ಬೆಂಗಳೂರಿಗೆ ಹೊರಡಲು ಮುಂದಾದಾಗ ರಾತ್ರಿ 12:50ಕ್ಕೆ ಮತ್ತೆ ಗುಂಡಿನ ದಾಳಿ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿದಾಗ 2 ಬುಲೆಟ್‌ಗಳು ಪತ್ತೆಯಾಗಿವೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದ ಬಳಿಕ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ ಮೂರು ಸುತ್ತು ಗುಂಡು ಹಾರಿಸಿದ್ದರು. ರಿಕ್ಕಿ ರೈ ಹೆಚ್ಚಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದ ಕಾರಣ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಮೂಗು ಮತ್ತು ಕೈಗೆ ಗುಂಡು ತಾಗಿ ಗಂಭೀರ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಚುರುಕು ಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ಪೊಲೀಸ್‌ ಕಾರ್ಯಾಚರಣೆ ಮುಂದುವರಿದಿದೆ.

Related Posts

Leave a Reply

Your email address will not be published. Required fields are marked *