Menu

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ: ಡಿಕೆ ಶಿವಕುಮಾರ್

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ ಎಂದರು.

ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ ಎಂದು ಹೇಳಿದರು.

ಇದಕ್ಕೂಮೊದಲು ಶಿವಕುಮಾರ್ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇಗುಲಕ್ಕೆ  ತೆರಳಿ ಪೂಜೆ ಸಲ್ಲಿಸಿ  ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Related Posts

Leave a Reply

Your email address will not be published. Required fields are marked *