Menu

ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಆಗಿರುವ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅನುಮತಿ ನೀಡಿದ್ದಾರೆ.

ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರ ಬಳಕೆ, ದಲಿತರ ಜಾತಿನಿಂದನೆ ಒಳಗೊಂಡಂತೆ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪಗಳಿವೆ. ಎಫ್‌ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ, ಜಾಮೀನು ಪಡೆದು ಹೊರ ಬಂದಿದ್ದಾರೆ. ನಂತರ ಬಜೆಟ್ ಅಧಿವೇಶನದಲ್ಲೂ ಭಾಗಿಯಾಗಿದ್ದರು.

ಬಜೆಟ್ ಅಧಿವೇಶನದಲ್ಲಿ ಸಚಿವ ಕೆ ಎನ್ ರಾಜಣ್ಣ ಹನಿಟ್ರ್ಯಾಪ್ ನಡೆಯುತ್ತಿದೆ ಎಂದು ಹೇಳಿದ್ದು ದೊಡ್ಡ ಚರ್ಚೆಯಾಗಿತ್ತು. ಬಿಜೆಪಿ ಶಾಸಕರು ಪ್ರತಿಭಟನೆಯನ್ನೂ ಮಾಡಿದ್ದರು. ಹನಿಟ್ರ್ಯಾಪ್ ಹಾಗೂ ಜಾತಿ ನಿಂದನೆ ಆರೋಪ ಹೊತ್ತಿದ್ದ ಶಾಸಕ ಮುನಿರತ್ನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕೆ ಟೀಕೆಗಳು ಕೇಳಿ ಬಂದಿದ್ದವು.

ಈಗ ಜಾತಿನಿಂದನೆ ಕೇಸ್ ಶಾಸಕ ಮುನಿರತ್ನಗೆ ಸಂಕಷ್ಟ ತಂದೊಡ್ಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಕ್ಕಿರುವು ದರಿಂದ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ. ಜಾತಿನಿಂದನೆ ಆರೋಪದಡಿ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಯನ್ನು ಸಿಐಡಿಯ ಎಸ್‌ಐಟಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ್ದ ಎಸ್‌ಐಟಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿತ್ತು. ಮುನಿರತ್ನ ಶಾಸಕರಾಗಿರುವ ಕಾರಣ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸ್ಪೀಕರ್ ಮೊರೆ ಹೋಗಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಕ್ಕಿರುವುದರಿಂದ ಕೋರ್ಟ್ ವಿಚಾರಣೆ ನಡೆಸಲು ಅನುಕೂಲ ಆಗಲಿದೆ.

Related Posts

Leave a Reply

Your email address will not be published. Required fields are marked *