Menu

ಮಾಡಬಾರದ್ದನೆಲ್ಲಾ ಮಾಡಿ ದೇವರ ಪೂಜೆ ಮಾಡಿದರೆ ಪಾಪಕರ್ಮ ಹೋಗುತ್ತಾ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸ ಬೇಕು. ಸಹಿಷ್ಣತೆ ಇರಬೇಕು. ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯ ಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದರು.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದು ಹೇಳಿದರು.

Related Posts

Leave a Reply

Your email address will not be published. Required fields are marked *