Menu

ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಪ್ರಧಾನಿ ಸಭೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸಭೆಯಲ್ಲಿ ಭಾಗವಹಿಸಿದ್ದರು. ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಲಾದ ದಾಳಿಯ ದಾಳಿಯ ಬಗ್ಗೆ ದೇಶಾದ್ಯಂತ ಆಘಾತ ಮತ್ತು ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮೋದಿ ಹಿಂದಿರುಗಿದ ಕೂಡಲೇ ಅಧಿಕಾರಿಗಳು ಅವರಿಗೆ ಸಂಬಂಧಿಸಿದ ಮಾಹಿತಿ ನೀಡಿದರು.

ಗೃಹ ಸಚಿವ ಅಮಿತ್ ಶಾ ಮಂಗಳವಾರ ಸಂಜೆ ಶ್ರೀನಗರಕ್ಕೆ ಧಾವಿಸಿ ಭದ್ರತಾ ಕ್ರಮಗಳನ್ನು ನಿರ್ದೇಶಿಸಿದ್ದರು. ದಾಳಿಯ ಪ್ರತ್ಯಕ್ಷದರ್ಶಿಗಳು ಭಯೋತ್ಪಾದಕರು ಪ್ರವಾಸಿಗರನ್ನು ಹಿಂದೂಗಳೆಂದು ಕನ್ಫರ್ಮ್​ ಮಾಡಿಕೊಂಡ ಬಳಿಕವೇ ಅವರ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಿಕೆ ನೀಡಿದ್ದು, ಈ ದಾಳಿ ಧಾರ್ಮಿಕ ಪ್ರೇರಿತವಾಗಿದೆ ಎಂದಿದ್ದಾರೆ.

Related Posts

Leave a Reply

Your email address will not be published. Required fields are marked *