Menu

ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ

cm siddaramaiah

ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ.

ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕರ್ನಾಟಕದ ಪ್ರವಾಸಿಗರ ಬಗ್ಗೆ ವಿವರಣೆ ನೀಡಿದರು.ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್ ಗೆ ಸಂತೋಷ್ ಲಾಡ್ ಅವರು ಬಂದಿಳಿದಿದ್ದಾರೆ. ಬೆಳಗ್ಗಿನಿಂದಲೇ ಲಾಡ್ ಅವರು ಮೃತದೇಹವನ್ನು ಇರಿಸಿರುವ ಸ್ಥಳಗಳಿಗೆ ತೆರಳಿ ಮೃತದೇಹ ಗುರುತಿಸಲು ಸಂಬಂಧಿಕರಿಗೆ ಸಹಾಯ ಮಾಡುತ್ತಿದ್ದಾರೆ. ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದ ಲಾಡ್ ಅವರು, ರಕ್ಷಣಾ ಕಾರ್ಯದ ಬಗ್ಗೆ ವಿವರಣೆ ನೀಡಿದರು. ಮೃತ ದೇಹಗಳನ್ನು ರಾಜ್ಯಕ್ಕೆ ಸಾಗಿಸುವ ನಿಟ್ಟಿನಲ್ಲಿ ನೆರವನ್ನು ಕೋರಿದರು. ಗಾಯಾಳುಗಳಿಗೂ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೆರವನ್ನು ಕೋರಿದರು.

Related Posts

Leave a Reply

Your email address will not be published. Required fields are marked *