ಧಾರವಾಡದ ಗಾಂಧಿಚೌಕ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಾಲ್ವರು ಯುವಕರು ಆರ್‌ಎಸ್‌ಎಸ್ ಮುಖಂಡ ಶಿರೀಶ್ ಬಳ್ಳಾರಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಿಗರೇಟು ಸೇದುತ್ತಿದ್ದ ನಾಲ್ವರಿಗೆ ಶಿರೀಶ್ ಅವರು ಬುದ್ಧಿವಾದ ಹೇಳಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾಲ್ವರು ಶಿರೀಶ್ ಅವರ ಮನೆಯೊಳಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಶಿರೀಶ್ ಅವರ ಕುಟುಂಬಸ್ಥರ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹಲ್ಲೆ ಮಾಡಿದ ನಂತರ ನಾಲ್ವರು ನಾಪತ್ತೆಯಾಗಿದ್ದಾರೆ ಈ ಸಂಬಂಧ ದೂರು ಪಡೆದಿರುವ ಧಾರವಾಡ ಶಹರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.