ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಮತ್ತು ಗೆಳೆಯ ತರುಣ್ ರಾಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠ ರದ್ದುಗೊಳಿಸಿದೆ.
ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರನ್ಯಾ ರಾವ್ ಇದ್ದಾರೆ. ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಶನಿವಾರ ಬೆಳಿಗ್ಗೆ ತೀರ್ಪು ಪ್ರಕಟಿಸಿದ್ದಾರೆ.