ಉಕ್ರೇನ್ ವಿರುದ್ಧ ಮೇ 8ರಿಂದ 10ರವರೆಗೆ ಕದನ ವಿರಾಮವನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಘೋಷಿಸಿದ್ದಾರೆ.
ಮಾನವೀಯ ನೆಲೆಯಲ್ಲಿ ಮೂರು ದಿನಗಳ ಕಾಲ ಉಕ್ರೇನ್ ಮೇಲೆ ಯಾವುದೇ ದಾಳಿ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ನಾವು ಮೂರು ದಿನಗಳ ಕಾಲ ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಿದ್ದೇವೆ. ಆದರೆ ಈ ಅವಧಿಯಲ್ಲಿ ಉಕ್ರೇನ್ ದಾಳಿ ನಡೆಸಿದರೆ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಈ ಅವಧಿಯಲ್ಲಿ ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ದಾಳಿ ನಡೆಸುವುದು ಸರಿಯಲ್ಲ. 5000 ಯೋಧರು ಸಾಯುತ್ತಿದ್ದಾರೆ ಎಂದು ಟ್ವೀಟ್ ಮಾಡಿದ ಬೆನ್ನಲ್ಲೇ ರಷ್ಯಾ ಈ ನಿರ್ಧಾರ ಪ್ರಕಟಿಸಿದೆ.