ತಿರುಪತಿ:ವೇಗವಾಗಿ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಅಪಘಾತ ನಡೆದಿದೆ.
ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರ್ಟಿಕಾ ಕಾರಿನಲ್ಲಿ ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಸೇರಿದಂತೆ ಐವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಮೃತರು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.


