ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ನೇಮಿಸಿದೆ. ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿ ನಾರಾಯಣನ್ ಅವರ ನೇಮಕವು ಜನವರಿ 14 ರಿಂದ ಎರಡು ವರ್ಷಗಳ ಅವಧಿಗೆ ಇರುತ್ತದೆ. ನಾರಾಯಣನ್ ಅವರಿಗೆ ನಾಲ್ಕು ದಶಕಗಳ ಅನುಭವವಿದೆ. ಇಸ್ರೋದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು GSLV Mk Ill ವಾಹನದ C25 ಕ್ರಯೋಜೆನಿಕ್ ಯೋಜನೆಯ ಯೋಜನಾ ನಿರ್ದೇಶಕರಾಗಿದ್ದರು.
ನಾಲ್ಕೂವರೆ ವರ್ಷ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (VSSC) ASLV ಮತ್ತು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV) ನ ಸೌಂಡಿಂಗ್ ರಾಕೆಟ್‌ಗಳು ಮತ್ತು ಘನ ಪ್ರೊಪಲ್ಷನ್ ಪ್ರದೇಶದಲ್ಲಿ ಕೆಲಸ ಮಾಡಿದ್ದಾರೆ. 1989 ರಲ್ಲಿ IIT-ಖರಗ್‌ಪುರದಲ್ಲಿ ಮೊದಲ ಶ್ರೇಣಿಯೊಂದಿಗೆ ಕ್ರಯೋಜೆನಿಕ್ ಎಂಜಿನಿಯರಿಂಗ್‌ನಲ್ಲಿ M.Tech ಪೂರ್ಣಗೊಳಿಸಿದ್ದಾರೆ.