ಕಾರ್ಯಕ್ರಮವೊಂದರಲ್ಲಿ ಕನ್ನಡಿಗರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿ ಕನ್ನಡಾಭಿಮಾನವನ್ನು ಮೆರೆದಾಗ ಅದನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.
ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ) ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿ ಕೇಳಿದ್ದಕ್ಕೆ, ಇದಕ್ಕೆ ಪಹಲ್ಗಾಮ್‌ನಲ್ಲಿ ಅಟ್ಯಾಕ್ ಆಗಿದ್ದು ಎಂದು ಸೋನು ನಿಗಮ್ ಹೇಳಿದ್ದ ವೀಡಿಯೊ ವೈರಲ್ ಆಗಿದೆ.
ಇದಾದ ನಂತರ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಯಾವುದೇ ನಿರ್ಮಾಪಕರು ಸೋನು ನಿಗಮ್ ಅವರಿಂದ ಹಾಡು ಹಾಡಿಸಬಾರದು, ಹಾಡಿಸಿದರೆ ಅದಕ್ಕೆ ನೀವೆ ಹೊಣೆ ಎಂದು ಎಚ್ಚರಿಕೆ ನೀಡಿವೆ.
ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್‌ಐಆರ್, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಸೋನು ನಿಗಮ್, ಕನ್ನಡ, ಕನ್ನಡ ಎಂದು ಖುಷಿಯಲ್ಲಿ ಹೇಳುವುದಕ್ಕೂ, ಕೋಪದಿಂದ ಬೆದರಿಕೆಯೊಡ್ಡುವ ರೀತಿ ಹೇಳುವುದಕ್ಕೂ ವ್ಯತ್ಯಾಸ ಇದೆ. ನಾನು ಶೋ ನೀಡುವಾಗ ನಾಲ್ಕೈದು ಗೂಂಡಾಗಳ ರೀತಿಯಲ್ಲಿ ಇದ್ದರು. ಆ ನಾಲ್ಕೈದು ಜನರಿಗೆ ತಿಳುವಳಿಕೆ ಹೇಳುವುದು ಅಗತ್ಯವಿತ್ತು ಎಂದು ತನ್ನನ್ನು ತಾನು ಸಮರ್ಥಿಸಿಕೊಂಡಿದ್ದಾರೆ.