Menu

ಭಾರತ- ಪಾಕ್‌ ಉದ್ವಿಗ್ನತೆ: ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಮಾಲೋಚನೆ ಸಭೆ

ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು ಸಮಾಲೋಚನೆ ನಡೆಸಲಿದೆ.

ಪಹಲ್ಗಾಮ್ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಸೇರಿದಂತೆ ಇತರ ಬೆಳವಣಿಗೆಗಳ ಬಗ್ಗೆ ವಿಶ್ವಸಂಸ್ಥೆಗೆ ವಿವರಿಸುವುದಾಗಿ ಪಾಕಿಸ್ತಾನದ ವಿದೇಶಾಂಗ ಹೇಳಿದೆ. ಈ ಸಭೆಯು ಅಂತರರಾಷ್ಟ್ರೀಯ ಸಮುದಾಯಕ್ಕೆ ನಿಖರವಾದ ಸಂಗತಿಗಳನ್ನು ಪ್ರಸ್ತುತಪಡಿಸುವ ಪಾಕಿಸ್ತಾನದ ಪ್ರಯತ್ನಗಳ ಭಾಗವಾಗಿದೆ” ಎಂದು 15 ರಾಷ್ಟ್ರಗಳ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ಪಾಕಿಸ್ತಾನದ ವಿದೇಶಾಂಗ ಕಚೇರಿ ತಿಳಿಸಿದೆ.

ವಿಶ್ವಸಂಸ್ಥೆಗೆ ಗ್ರೀಸ್‌ನ ಖಾಯಂ ಪ್ರತಿನಿಧಿ ಮತ್ತು ಈ ತಿಂಗಳ ಭದ್ರತಾ ಮಂಡಳಿಯ ಅಧ್ಯಕ್ಷ ರಾಯಭಾರಿ ಇವಾಂಜೆಲೋಸ್ ಸೆಕೆರಿಸ್, ಭಯೋತ್ಪಾದನೆಯನ್ನು ಅದರ ಎಲ್ಲಾ ರೂಪಗಳಲ್ಲಿ, ಅದು ಎಲ್ಲೆಡೆ ನಡೆಯುತ್ತಿರುವುದನ್ನು ನಾವು ಖಂಡಿಸುತ್ತೇವೆ. ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಈ ಉದ್ವಿಗ್ನತೆಯ ಬಗ್ಗೆ ನಾವು ಕಳವಳ ವ್ಯಕ್ತಪಡಿಸುತ್ತೇವೆ. ಪರಿಸ್ಥಿತಿಯು ಕೈಮೀರದಂತೆ ಉಭಯ ರಾಷ್ಟ್ರಗಳ ನಾಯಕರ ಜೊತೆಗೆ ಮಾತನಾಡುತ್ತಿದ್ದೇವೆ  ಎಂದು ಸುದ್ದಿ ಸಂಸ್ಥೆಗೆ ಹೇಳಿದ್ದರು. ಪಾಕಿಸ್ತಾನವು ಜಾಗತಿಕ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ದುರ್ಬಲಗೊಳಿಸುತ್ತಿದೆ ಎಂದು ಭಾರತವು ವಿಶ್ವಸಂಸ್ಥೆಗೆ ಎಚ್ಚರಿಕೆ ನೀಡಿತ್ತು,

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದ ಮಿಲಿಟರಿ ನೆಲೆಗಳನ್ನು ಹೊರಹಾಕುವುದು, ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಮತ್ತು ಅಟ್ಟಾರಿ ಭೂ-ಸಾರಿಗೆ ಠಾಣೆಗಳನ್ನು ತಕ್ಷಣ ಮುಚ್ಚುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತವು ಹಲವು ಕ್ರಮ ಕೈಗೊಂಡಿದೆ. ಪಾಕಿಸ್ತಾನವು ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ.

Related Posts

Leave a Reply

Your email address will not be published. Required fields are marked *