ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮೃತಪಟ್ಟವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ (29), ಅಂಜಲಿ (26), ಸಂದೀಪ್ (26), ವಿಠಲ್ (55) ಶಶಿಕಲಾ (40) ಎಂದು ಗುರುತಿಸಲಾಗಿದೆ.
ಮೃತಪಟ್ಟವರೆಲ್ಲ ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು. ಈ ವೇಳೆ ಕುಸುಗಲ್ ಗ್ರಾಮದ ಇಂಗಳಹಳ್ಳಿ ಕ್ರಾಸ್ ಬಳಿ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲಿಯೇ ಅಸು ನೀಗಿದ್ದಾರೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.