Menu

ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ

ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಆಮಿಸುವ ವಿದೇಶಗಳ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ ಹಡಗುಗಳು ಹಾಗೂ ಮೀನುಗಾರಿಕಾ ಬೋಟ್‌ಗಳ ತಪಾಸಣೆ ನಡೆಸಲಾಗುತ್ತಿದೆ. 12 ನಾಟಿಕನ್ ಮೈಲೂ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದ್ದು, ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಮಂಗಳೂರಿನ ಕಡಲ ತೀರ ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್‌ಗಳನ್ನ ತಪಾಸಣೆ ನಡೆಸಿ ಮೀನುಗಾರರ ದಾಖಲೆ ಪರಿಶೀಲಿಸುತ್ತಿದ್ದಾರೆ. ಅನುಮಾನಾಸ್ಪದ ಬೋಟ್‌ಗಳ ಮೇಲೆ ನಿಗಾ ಇಟ್ಟಿರುವ ಪೊಲೀಸರು ತಪಾಸಣೆ ಮುಂದುವರಿಸಿದ್ದಾರೆ.

ಉಡುಪಿಯಲ್ಲೂ ಹೈಅಲರ್ಟ್ ಘೋಷಣೆಯಾಗಿದ್ದು, ಕರಾವಳಿ ಕಾವಲು ಪೊಲೀಸರು 22 ಕಿ.ಮೀ ಆಳ ಸಮುದ್ರದಲ್ಲಿ 320 ಕಿಮೀವರೆಗೆ ಕಾವಲು ಕಾಯುತ್ತಿದ್ದಾರೆ. ಪ್ರವಾಸಿ ತಾಣಗಳ ಮೇಲೂ ನಿಗಾ ಇಡಲಾಗಿದೆ. ಮಲ್ಪೆ ಕಡಲತೀರ, ಮರವಂತೆ, ಪಡುಬಿದ್ರೆ -ಕಾಪು ಪ್ರದೇಶಗಳಲ್ಲಿ ಸಿಎಸ್‌ಪಿ ಪಡೆ ಕಣ್ಗಾವಲು ಇಟ್ಟಿದೆ.

Related Posts

Leave a Reply

Your email address will not be published. Required fields are marked *