ಉತ್ತರಾಖಂಡ್‌ನ ಉತ್ತರಕಾಶಿ ಜಿಲ್ಲೆಯಲ್ಲಿ ಗಂಗೋತ್ರಿ ಕಡೆಗೆ ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡು ಐವರು ಪ್ರಾಣ ಕಳೆದುಕೊಂಡಿದ್ದಾರೆ. ಇಂದು (ಗುರುವಾರ) ಬೆಳಗ್ಗೆ 9 ಗಂಟೆಗೆ ಈ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು, ಸೇನಾ ಸಿಬ್ಬಂದಿ, ವಿಪತ್ತು ನಿರ್ವಹಣಾ ತಂಡ, 108 ಆಂಬ್ಯುಲೆನ್ಸ್, ಭಟ್ವಾರಿಯ ಬಿಡಿಒ, ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಖಾಸಗಿ ಹೆಲಿಕಾಪ್ಟರ್‌ನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಇಬ್ಬರು ಗಾಯಗೊಂಡಿದ್ದು, ಉಳಿದವರು ಅಸು ನೀಗಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.