ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಇರುವ ಕಾರಣ ದೇಶದಲ್ಲಿ ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಪಾಕಿಸ್ತಾನದ ಅಪ್ರೋಚಿತ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಉಗ್ರ ಸಂಘಟನೆಗಳ ಸ್ಲೀಪರ್ ಸೆಲ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವವ ಮೇಲೆ ನಿಗಾ ವಹಿಸುವಂತೆ ಕೇಂದ್ರ ಸೂಚನೆ ನೀಡಿದೆ.
ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಹೈಅಲರ್ಟ್
ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ರಾಜ್ಯ ಸರ್ಕಾರ ಹೈ ಅಲರ್ಟ್ ಆಗಿದ್ದು, ವಿಮಾನ ನಿಲ್ದಾಣ, ಜಲಾಶಯ ಹಾಗೂ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿದೆ. ಅಲ್ಲದೇ ಸಾಮಾಜಿಕ ಜಾಲತಾಣಗಳ ಮೇಲೆ ಪೋಸ್ಟ್ ಗಳ ಮೇಲೆ ನಿಗಾ ವಹಿಸಲು ಸೈಬರ್ ಪೊಲೀಸರಿಗೆ ಸೂಚನೆ ನೀಡಿದೆ.