Menu

ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ಬೆಂಗಳೂರಿನಲ್ಲಿ ಇಂದು ತಿರಂಗಾ ಯಾತ್ರೆ

ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು  ಇಂದು 09-05-2025 ರಂದು ಶುಕ್ರವಾರ ಬೆಳಗ್ಗೆ 9.30 ರಿಂದ 10.30 ರವರೆಗೆ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್ ವರೆಗೆ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಈ ಯಾತ್ರೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಾಹಿತಿಗಳು, ಚಿಂತಕರು, ಚಿತ್ರರಂಗದವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸರ್ವರೂ ಭಾಗವಹಿಸಲು ಮುಕ್ತ ಆಹ್ವಾನ ನೀಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್  ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *