ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದ ಸೂಚನೆ ಮೇರೆಗೆ ರಾಜ್ಯದ ಪೊಲೀಸರ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದಿಂದ ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದರು.
ರಾಜ್ಯ ಸರ್ಕಾರ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸರಿಗೆ ರಜೆ ರದ್ದುಗೊಳಿಸಲಾಗಿದ್ದು, ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.