Menu

ತಿರುಪತಿಯಲ್ಲಿ ಭಕ್ತರ ನೂಕುನುಗ್ಗಲಿಂದ ಕಾಲ್ತುಳಿತಕ್ಕೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆ

ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ  ವೈಕುಂಠ ಏಕಾದಶಿ ಪ್ರಯುಕ್ತ  ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್‌ ಪಡೆಯಲು ಭಕ್ತರು ನೂಕು ನುಗ್ಗಲು ಉಂಟು ಮಾಡಿದ್ದರಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದೆ. ಟೋಕನ್ ಪಡೆಯಲು ಭಕ್ತರ ದಟ್ಟಣೆ ಹೆಚ್ಚಿದ್ದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ ಒಟ್ಟು 20 ಮಂದಿ ಗಾಯಗೊಂಡಿದ್ದಾರೆ.

ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ವೈಕುಂಠ ದರ್ಶನ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿದೆ. ಬುಧವಾರ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ಭಕ್ತರೊಬ್ಬರು ಅಸ್ವಸ್ಥರಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಗಿತ್ತು. ಆಗ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ಧಾವಿಸಿ ದುರಂತ ಸಂಭವಿಸಿದೆ.

ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಚಂದ್ರಬಾಬು ಆದೇಶಿಸಿದ್ದಾರೆ. ಸಿಎಂ ಚಂದ್ರಬಾಬು ನಾಯ್ಡು ತಿರುಪತಿಗೆ ಭೇಟಿ ನೀಡಲಿದ್ದಾರೆ.

Related Posts

Leave a Reply

Your email address will not be published. Required fields are marked *