ನವದೆಹಲಿ: ಭಾರತ ಕ್ರಿಕೆಟ್ ನ ಬ್ಯಾಟಿಂಗ್ ದಂತಕತೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಜಾಗತಿಕ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಕೆಲವು ದಿನಗಳಿಂದ ವದಂತಿ ಹರಡುತ್ತಿದ್ದು, ಸೋಮವಾರ ಬೆಳಿಗ್ಗೆ ಇನ್ ಸ್ಟಾಗ್ರಾಂನಲ್ಲಿ ಭಾವಾನಾತ್ಮಕ ಪೋಸ್ಟ್ ಮೂಲಕ ಟೆಸ್ಟ್ ಬದುಕಿಗೆ ವಿದಾಯ ಹೇಳಿದ್ದಾರೆ.
ರೋಹಿತ್ ಶರ್ಮ ಟೆಸ್ಟ್ ಕ್ರಿಕೆಟ್ ಗೆ ದಿಢೀರನೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸುವ ಇಂಗಿತ ವ್ಯಕ್ತಪಡಿಸಿ ಬಿಸಿಸಿಐಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ ಬಿಸಿಸಿಐ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿತ್ತು ಎಂದು ಹೇಳಲಾಗಿದೆ.
ಆದರೆ ಬಿಸಿಸಿಐ ಮನವಿಯನ್ನು ಪರಿಗಣಸದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದು, ಏಕದಿನ ಕ್ರಿಕೆಟ್ ನಲ್ಲಿ ಮುಂದುವರಿಯುವ ಸುಳಿವು ನೀಡಿದ್ದಾರೆ.
ಇದೊಂದು ಕಠಿಣ ನಿರ್ಧಾರವಾಗಿತ್ತು. ಆದರೆ ನನ್ನ ನಿರ್ಧಾರ ಸರಿಯಾಗಿ ಇದೆ ಎಂಬ ನಂಬಿಕೆ ಇದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.