ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್ ಸದಸ್ಯರ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾತನಾಡಿದ ಅವರು, ಭಾರತ – ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ವಿಚಾರ ಸಂಬಂಧ ಕೇಂದ್ರದ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ. ಸಭೆ ಬಳಿಕ ಈ ಪ್ರತಿಕ್ರಿಯಿಸುವುದಾಗಿ ಹೇಳಿದರು. ಎರಡು ದೇಶಗಳ ಡಿಜಿಎಂಗಳು ಇಂದು ಸಭೆ ಮಾಡುತ್ತಿದ್ದಾರೆ. ಸಭೆಯಲ್ಲಿ ಏನು ತೀರ್ಮಾನ ಮಾಡುತ್ತಾರೆ ಮಾಡಲಿ. ಆ ಬಳಿಕ ಉತ್ತರಿಸುವೆ ಎಂದರು.
ಕದನ ವಿರಾಮ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ವಿಚಾರ ಕುರಿತು ಕೇಳಿದ ಪ್ರಶ್ನೆಗೆ, ಆ ಬಗ್ಗೆ ನಾನು ಮಾತನಾಡುವುದಿಲ್ಲ. ಸದ್ಯಕ್ಕೆ ಕದನ ವಿರಾಮ ಘೋಷಣೆ ಆಗಿದೆ . ಅದನ್ನು ಸ್ವಾಗತ ಮಾಡಿದ್ದೇನೆ. ಯುದ್ದದ ಬಗ್ಗೆ ನಾನೇನೂ ಮಾತನಾಡುವುದಿಲ್ಲ ಎಂದು ಹೇಳಿದರು.
ಎರಡು ವರ್ಷದ ಸಂಭ್ರಮಾಚರಣೆ ಸಂಬಂಧ ಸಂಜೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಮಾನದ ಬಳಿಕ ನಿರ್ಧಾರವಾಗಲಿದೆ. ರಾಜ್ಯ ಸರ್ಕಾರ ಸಂಭ್ರಮ ಆಚರಣೆಗೆ ಸಿದ್ಧವಾಗಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.