ಬೆಂಗಳೂರು ಸೇರಿದಂತೆ ನಿನ್ನೆ ರಾಜ್ಯ ಬಹುತೇಕ ಕಡೆ ಭಾರೀ ಮಳೆ ಸುರಿದಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ, ಚಾಮರಾಜನಗರ,ಬೀದರ್, ಬಿಜಾಪುರ, ಬಾಗಲಕೋಟೆ, ಉಡುಪಿ ಸೇರಿದಂತೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳವಾರ ದಾವಣಗೆರೆಯಲ್ಲಿ ಅತಿ ಹೆಚ್ಚಿನ ಮಳೆ ಸುರಿದಿದ್ದರೆ, ಬೆಂಗಳೂರಿನಲ್ಲಿ 34.7 ಮಿಲಿ ಮೀಟರ್ ನಷ್ಟು ಮಳೆಯಾಗಿದೆ. ಗಾಳಿ ಮಳೆಗೆ 36 ಮರಗಳು ಧರೆಗುಳಿದ್ದರೆ ಹಾಗೂ 121ಕೊಂಬೆಗಳು ಮುರಿದು ಬಿದ್ದಿವೆ. ಜನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ರಾಜ್ಯದ ನಾನಾ ಕಡೆಗಳಲ್ಲಿ ಮಳೆ, ಸಿಡಿಲು ಸೇರಿದಂತೆ ಮಳೆ ಸಂಬಂಧಿತ ಅವಘಡಗಳಿಗೆ ಏಳು ಮಂದಿ ಬಲಿಯಾಗಿದ್ದು, ಮನೆಗಳ ಚಾವಣಿ ಹಾರಿ ಹೋಗಿದ್ದು, ಅವಾಂತರ ಸೃಷ್ಟಿಯಾಗಿದೆ.