ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ ರು ಬಹಿರಂಗಪಡಿಸಿದ್ದಾರೆ.
ನವೆಂಬರ್ 23 ರಂದು ಬಾಲಕಿಯನ್ನು ಅಪಹರಿಸಲಾಗಿತ್ತು. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತ್ತು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಿಂದ ಜನವರಿ 5 ರಂದು ಬಾಲಕಿಯನ್ನು ರಕ್ಷಿಸಲಾಗಿತ್ತು. ಆಕೆಯನ್ನು ಟ್ಯೂಷನ್ ಶಿಕ್ಷಕನೇ ಅಪಹರಿಸಿದ್ದ ಎಂದು ಉಪ ಪೊಲೀಸ್ ಆಯುಕ್ತ (ಬೆಂಗಳೂರು ದಕ್ಷಿಣ ವಿಭಾಗ) ಲೋಕೇಶ್ ಬಿಜೆ ತಿಳಿಸಿದ್ದಾರೆ.
ಆರೋಪಿಯು 25 ವರ್ಷದವನಾಗಿದ್ದು, ಬಂಧಿಸಿ ಆತನ ವಿರುದ್ಧ ಅಪಹರಣ ಮತ್ತು ಅತ್ಯಾಚಾರದ ಆರೋಪ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.