Menu

ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಗುರುವಾರ ಬೆಳಿಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟ ಏಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಧಿಕಾರಿಗಳಾದ ಟಿ.ವಿ.ಮುರಳಿ, ಹೆಚ್‌.ಆರ್‌.ನಟರಾಜ್‌ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಅನಂತ್‌ಕುಮಾರ್‌ಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಖಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ತುಮಕೂರು ನಿರ್ಮಿತಿ ಕೇಂದ್ರ ಎಂಡಿ ರಾಜಶೇಖರ ಮನೆ ಮೇಲೆ ಮೇಲೆ ದಾಳಿ ನಡೆಸಿದ್ದು, ತುಮಕೂರಿನ ಸಪ್ತಗಿರಿ ಬಡಾವಣೆ, ಎಸ್‌ಎಸ್ ಪುರಂನಲ್ಲಿ ಇರುವ ರಾಜಶೇಖರ ಸಹೋದರನ ಮನೆ ಮೇಲೂ ದಾಳಿ ಆಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ 10 ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ, ಆಸ್ತಿಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಶಹಾಪೂರ ತಹಸೀಲ್ದಾರ್‌ ಉಮಾಕಾಂತ ಹಳ್ಳೆ ಅವರ ಮನೆ, ಅಕ್ಕಮಹಾದೇವಿ ಬಡಾವಣೆಯಲ್ಲಿರುವ ತಹಸೀಲ್ದಾರ್‌ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *