ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಅಭಿಮನ್ಯು ಈಶ್ವರನ್ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಇಶಾನ್ ಕಿಶನ್ ಮತ್ತು ಯಶಸ್ವಿ ಜೈಸ್ವಾಲ್ ಸ್ಥಾನ ಗಳಿಸಿದ್ದಾರೆ.
ಮೇ 30 ಮತ್ತು ಜೂನ್ 6ರಂದು ಎರಡು ಪಂದ್ಯಗಳು ನಡೆಯಲಿದ್ದು, ಇಂಗ್ಲೆಂಡ್ ಲಯನ್ಸ್ ಮತ್ತು ಕ್ಯಾಂಟರ್ ಬರ್ರಿ ತಂಡಗಳ ವಿರುದ್ಧ ಆಡಲಿದೆ. ನಂತರ ಭಾರತ ಹಿರಿಯರ ವಿರುದ್ಧ ಕೊನೆಯ ಪಂದ್ಯವಾಡಲಿದೆ.
2016ರಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ ಸಿಡಿಸಿದ ಕರುಣ್ ನಾಯರ್ ಕಳೆದ ವರ್ಷ ರಣಜಿ ಟ್ರೋಫಿಯಲ್ಲಿ 53.93ರ ಸರಾಸರಿಯಲ್ಲಿ 863 ರನ್ ಗಳಿಸಿ ಅತೀ ಹೆಚ್ಚು ರನ್ ಗಳಿಸಿದ 4ನೇ ಆಟಗಾರ ಎನಿಸಿಕೊಂಡಿದ್ದರು.
ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಮೇಲೆ ಕಣ್ಣಿಟ್ಟಿದ್ದು, ಕರುಣ್ ನಾಯರ್ ಮತ್ತು ಅಭಿಮನ್ಯು ಈಶ್ವರನ್ ಮೇಲೆ ಭರವಸೆ ಇಟ್ಟಿದ್ದಾರೆ ಎನ್ನಲಾಗಿದೆ.
ವಿಕೆಟ್ ಕೀಪರ್ ಧ್ರುವ ಜುರೆಲ್ ಗೆ ಉಪನಾಯಕ ಸ್ಥಾನ ನೀಡಲಾಗಿದ್ದು, ಶುಭಮನ್ ಗಿಲ್, ಸಾಯಿ ಸುದರ್ಶನ್ ನಂತರ ತಂಡವನ್ನು ಸೇರಿಕೊಳ್ಳಲಿದ್ದರೆ. ನಿತೀಶ್ ಕುಮಾರ್ ರೆಡ್ಡಿ, ಶಾರ್ದೂಲ್ ಠಾಕೂರ್, ಋತುರಾಜ್ ಗಾಯಕ್ವಾಡ್ ಮತ್ತು ಸರ್ರಫರಾಜ್ ಖಾನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಎ ತಂಡ
ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಕರುಣ್ ನಾಯರ್, ಧ್ರುವ ಜುರೆಲ್ (ಉಪನಾಯಕ), ನಿತಿಶ್ ಕುಮಾರ್ ರೆಡ್ಡಿ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಮಾನವ್ ಸುತ್ತರ್, ತನುಷ್ ಕೋಟ್ಯಾನ್, ಮುಖೇಶ್ ಕುಮಾರ್, ಆಕ್ಷ್ ದೀಪ್, ಹರ್ಷಿತ್ ರಾಣ, ಅನ್ಸುಲ್ ಕಾಂಬೋಜ್, ಖಲೀಲ್ ಅಹ್ಮದ್, ಋತುರಾಜ್ ಗಾಯಕ್ವಾಡ್, ಸರ್ಫರಾಜ್ ಖಾನ್, ತುಷಾರ್ ದೇಶಪಾಂಡೆ, ಹರ್ಷ್ ದುಬೆ.