ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡಿನ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಹತ್ತೊಂಬತ್ತು ವರ್ಷದ ಯುವಕ ಅಭಿಷೇಕ್ ಮೃತಪಟ್ಟವ ಎಂದು ಗುರುತಿಸಲಾಗಿದೆ. ಗ್ರಾಮದ ಅನಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರನಾದ ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದ. ನೋಡಿದ ಸ್ಥಳೀಯರು ಆಸ್ಪತ್ರೆಗೆ ಕರೆದೊ ಯ್ದರೂ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆಂದು ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಯುವತಿ ಮೃತಪಟ್ಟಿದ್ದಾಳೆ. ಹತ್ತೊಂಬತ್ತು ವರ್ಷದ ಸಂಧ್ಯಾ ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿಯ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.
ಬಾತ್‌ರೂಂಗೆ ತೆರಳಿದ್ದಾಗ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು, ಅಷ್ಟು ಹೊತ್ತಿಗೆ ಸಂಧ್ಯಾ ಅಸು ನೀಗಿದ್ದಳು.