Menu

Suicide death- ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ: ಪತಿ ಅರೆಸ್ಟ್‌

ಬೆಂಗಳೂರಿನ ಎಸ್‍ಜಿ.ಪಾಳ್ಯದಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡವರು. ಶಿಲ್ಪಾ ಅವರು ಪ್ರವೀಣ್ ಎಂಬಾತನನ್ನು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಒಂದೂವರೆ ವರ್ಷದ ಮಗುವಿದೆ.

ಶಿಲ್ಪಾಳನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಪ್ರವೀಣ್ ಬಿಂಬಿಸುತ್ತಿದ್ದಾನೆ ಎಂದು ಆಕೆಯ ಕುಟುಂಬಸ್ಥರು, ಆರೋಪಿಸಿದ್ದಾರೆ. ಎಸ್‍ಜಿ ಪಾಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರವೀಣ್‍ನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಮಗ್ರ ವಿಚಾರಣೆಯ ಬಳಿಕ ನಿಜವಾದ ಕಾರಣ ಏನು ಎಂಬುದು ತಿಳಿದು ಬರಲಿದೆ.

ಪೊಲೀಸರು ಶಿಲ್ಪಾ ಅವರ ಸಾವಿನ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಶಿಲ್ಪಾ ಅವರ ಮೊಬೈಲ್ ಫೋನ್, ಕುಟುಂಬದವರೊಂದಿಗಿನ ಸಂವಹನಗಳು ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರವೀಣ್‌ನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304B (ವರದಕ್ಷಿಣೆ ಸಾವು) ಮತ್ತು ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *