Menu

ಮೆಟ್ರೋ ನಿಲ್ದಾಣಗಳ ಶೌಚಾಲಯ ಬಳಕೆಗಿನ್ನು ಶುಲ್ಕ ಪಾವತಿ

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿರುವ ಶೌಚಾಲಯಗಳ ಬಳಕೆಗೆ ಮೆಟ್ರೊ ಪ್ರಯಾಣಿಕರು ಇನ್ನು ಮುಂದೆ ಹಣ ಪಾವತಿಸಬೇಕಿದೆ. ಬಿಎಂಆರ್‌ಸಿಎಲ್‌ ನಮ್ಮ ಮೆಟ್ರೋ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಶುಲ್ಕ ನಿಗದಿ ಮಾಡಿದೆ. ಬಿಎಂಆರ್‌ಸಿಎಲ್‌ನ ಈ ಕ್ರಮಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಬಿಎಂಆರ್‌ಸಿಎಲ್‌ ಖಾಸಗಿ ಸಂಸ್ಥೆಯ ಜೊತೆಗೆ ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು ಮೂತ್ರ ವಿಸರ್ಜನೆಗೆ 2 ರೂ., ಮಲ ವಿಸರ್ಜನೆಗೆ 5 ರೂ. ದರ ನಿಗದಿ ಮಾಡಿದೆ. ನ್ಯಾಷನಲ್‌ ಕಾಲೇಜು, ಲಾಲ್‌ಬಾಗ್, ಸೌಥ್‌ ಆ್ಯಂಡ್‌ ಸರ್ಕಲ್‌, ಜಯನಗರ, ರಾಷ್ಟ್ರೀಯ ವಿದ್ಯಾಲಯ ರಸ್ತೆ, ಬನಶಂಕರಿ, ಜಯಪ್ರಕಾಶ ನಗರ, ಯೆಲಚೇನಹಳ್ಳಿ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್‌ ಕಾಲೇಜು, ಡಾ.ಅಂಬೇಡ್ಕರ್‌ ನಿಲ್ದಾಣ, ವಿಧಾನಸೌಧ, ಕಬ್ಬನ್‌ ಪಾರ್ಕ್‌ ಮತ್ತು ಮೆಜೆಸ್ಟಿಕ್‌ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಇನ್ನು ಮುಂದೆ ಹಣ ಪಾವತಿಸಿ ಬಳಸಬೇಕಾಗುತ್ತದೆ.
ಶೌಚಾಲಯಕ್ಕೆ ದರ ವಿಧಿಸಿದ್ದಕ್ಕೆ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದನ್ನು ಬಿಟ್ಟು ಶೌಚಾಲಯ ಬಳಕೆ ಮಾಡಿದ್ದಕ್ಕೆ ಜನರಿಂದ ದುಡ್ಡು ಸಂಗ್ರಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಈ ನಿಲ್ದಾಣಗಳಲ್ಲಿರುವ ಶೌಚಾಲಯಗಳು ಮೆಟ್ರೋ ಟಿಕೆಟ್‌ ಇಲ್ಲದೆ ಪ್ರವೇಶಿಸಬಹುದಾದ ಸ್ಥಳದಲ್ಲಿವೆ. ಹೀಗಾಗಿ ಈ ಶೌಚಾಲಯಗಳನ್ನು ಮೆಟ್ರೋ ಪ್ರಯಾಣಿಕರು ಅಲ್ಲದೆ ಬೇರೆಯವರು ಬಳಸುತ್ತಿದ್ದಾರೆ. ಹೀಗಾಗಿ ಅದರ ನಿರ್ವಹಣೆಯನ್ನು ಸುಲಭ್‌ ಇಂಟರ್‌ನ್ಯಾಷನಲ್‌ ಸಂಸ್ಥೆಗೆ ವಹಿಸಿದ್ದೇವೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *