Menu

ಕಾಂಗ್ರೆಸ್ ಪಕ್ಷದ “ಮತಗಳ್ಳತನ” ಬಯಲು ಮಾಡಿದ ಸಿದ್ದರಾಮಯ್ಯ: ಆರ್‌. ಅಶೋಕ

1991ರಲ್ಲಿ ಮಾನ್ಯ ಸಿದ್ದರಾಮಯ್ಯನವರು ಲೋಕಸಭೆಗೆ ಸ್ಪರ್ಧಿಸಿದ್ದು  ಕೊಪ್ಪಳ ಲೋಕಸಭಾ ಕ್ಷೇತ್ರದಿಂದ,  ಜನತಾದಳ ಪಕ್ಷದಿಂದ, ಸಿದ್ದರಾಮಯ್ಯವರವನ್ನ ಮೋಸದಿಂದ ಸೋಲಿಸಿದ್ದು  ಕಾಂಗ್ರೆಸ್ ಪಕ್ಷ. “ಮತಗಳ್ಳತನ” ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಕೆ. ರಾಜಣ್ಣ  ಅವರನ್ನು ಸಂಪುಟದಿಂದ ವಜಾ ಮಾಡಿದ್ದ ರಾಹುಲ್‌ ಗಾಂಧಿ ಅವರಿಗೆ ಅವರಿಗೆ, ಈಗ ಕಾಂಗ್ರೆಸ್ ಪಕ್ಷದ ಮೋಸವನ್ನು ಬಯಲು ಮಾಡಿರುವ   ಸಿದ್ದರಾಮಯ್ಯ ಅವರನ್ನು ಸ್ಥಾನದಿಂದ, ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವ ಧೈರ್ಯ ಇದೆಯಾ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತನಾ, 2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಮತ ಖರೀದಿ ಮೂಲಕ ಗೆದ್ದರು ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಈಗಾಗಲೇ ಬಯಲು ಮಾಡಿದ್ದಾರೆ. ಪಂಚಾಯಿತಿ ಇಂದ ಪಾರ್ಲಿಮೆಂಟ್ ವರೆಗೆ ಕಾಂಗ್ರೆಸ್ ಪಕ್ಷದ ಏಕಚಕ್ರಾಧಿಪತ್ಯ ಇದ್ದ ಕಾಲದಲ್ಲಿ, “ಆಗೆಲ್ಲಾ ಇವಿಎಂ ಇರಲಿಲ್ಲ, ಒಬ್ರೋ ಇಬ್ರೋ ಕೂತ್ಕೊಂಡು ಒತ್ತು ಬುಡ್ರೋ ಅನ್ನೋರು” ಎಂದು ಕಾಂಗ್ರೆಸ್ ಪಕ್ಷ 60 ವರ್ಷ ಹೇಗೆ ಚುನಾವಣೆ ಗೆಲ್ಲುತ್ತಿತ್ತು ಎನ್ನುವುದನ್ನ ಗೃಹ ಸಚಿವ ಪರಮೇಶ್ವರ್‌ ಲೀಲಾಜಾಲವಾಗಿ ವಿವರಿಸಿದ್ದಾರೆ ಎಂದು ಅಶೋಕ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮದ ಪಿತಾಮಹ ಯಾರಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ನೆಹರೂ-ಗಾಂಧಿ ಕುಟುಂಬ. ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ  ಮಾತನಾಡಿದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ ಎಂದು ಅಶೋಕ್‌ ಟೀಕಿಸಿದ್ದಾರೆ.

Related Posts

Leave a Reply

Your email address will not be published. Required fields are marked *