ಆರೋಗ್ಯ ಇಲಾಖೆಯು ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ಉದ್ದೇಶದೊಂದಿಗೆ ಇಂದಿನಿಂದ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಕೀಮೋಥೆರಪಿ ಕೇಂದ್ರಗಳನ್ನು ಆರಂಭಿಸುತ್ತಿದೆ.
ಕೀಮೋ ಥೆರಪಿ ಅಗತ್ಯವಿರುವ ರೋಗಿಗಳಿಗೆ ಉಚಿತವಾಗಿ ಲಭ್ಯವಾಗಲಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಇರಲಿದೆ.
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡುತ್ತಿದ್ದು, ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಕೀಮಿಯೋಥೆರಪಿ ಸೆಂಟರ್ ಗಳು ಜಿಲ್ಲಾಸ್ಪತ್ರೆಗಳಲ್ಲಿ ಆರಂಭವಾಗುತ್ತಿವೆ.
ಹಬ್ ಮತ್ತು ಸ್ಪೋಕ್ ಮಾಡಲ್ ನಲ್ಲಿ ಡೇ ಕೇರ್ ಕೀಮೋಥೆರಪಿ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಪ್ರತಿ ವರ್ಷ 70 ಸಾವಿರ ಹೊಸ ಕ್ಯಾನ್ಸರ್ ಪ್ರಕರಣ ಪತ್ತೆಯಾಗುತ್ತಿದ್ದು, ಬೆಂಗಳೂರು, ಹುಬ್ಬಳ್ಳಿ, ಕಲಬುರ್ಗಿ, ಬೆಳಗಾವಿ ಮತ್ತು ಮೈಸೂರು ನಗರಗಳಲ್ಲಿ ಕೀಮೋಥೆರಪಿಗಾಗಿ ರೋಗಿಗಳು ಬಹಳ ದೂರ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಹೀಗಾಗಿ ಹೆಚ್ಚಿನ ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗು ತ್ತಿದ್ದಾರೆ. ಈ ಯೋಜನೆ ಕ್ಯಾನ್ಸರ್ ರೋಗಿಗಳಿಗೆ ನೆರವಾಗಲಿದೆ.