ಬೆಳಗಾವಿ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿ ಮೇ 20 ರಂದು ಸ್ನೇಹಿತರ ಜೊತೆಗೆ ರಾತ್ರಿ ಸಿನಿಮಾ ನೋಡಲು ಹೋಗಿದ್ದಳು. ಸಿನಿಮಾ ನೋಡಿ ವಾಪಸ್ ಸ್ನೇಹಿತರ ಪ್ಲ್ಯಾಟ್ಗೆ ಹೋಗಿದ್ದಳು. ಅಲ್ಲಿ ಸ್ನೇಹಿತರು ಯುವತಿಗೆ ಪಾನೀಯದಲ್ಲಿ ನಿದ್ರೆ ಮಾತ್ರೆ ಹಾಕಿ ಬಳಿಕ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಲ್ಲಾಪುರದ ವಿನಯ್ ಪಾಟೀಲ್ (22), ಪುಣೆಯ ಸರ್ವಜ್ಞ ಗಾಯಕವಾಡ (22), ಸಾಂಗ್ಲಿಯ ತನ್ಮಯ್ ಪೇಡ್ನೆಕರ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗಳನ್ನ ಆರು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.