Menu

ಅಪ್ರಾಪ್ತ ವಯಸ್ಕ ಬಾಲಕಿಯ ರೇಪ್‌: ಮೇಖಳಿಯ ಸ್ವಾಮೀಜಿ ಅರೆಸ್ಟ್‌

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ​ಜೈಲಿಗಟ್ಟಿದ್ದಾರೆ.
ಆರೋಪಿಯು ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ರಾಯಚೂರಿಗೆ ಕರೆದೊಯ್ದು ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ಇದ್ದರು. ಮೇ 15ರಂದು ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ವಿದ್ದರು. ಎರಡೂ ಕಡೆ ಇದ್ದಾಗ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಮೇ 16ರಂದು ಆರೋಪಿಯು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ಹೋಗಿದ್ದು, ಈ ಬಗ್ಗೆ ಮೇ 17ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬಳಿಕ ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.
ಆರೋಪಿಯು ಮಠದಲ್ಲಿ ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದ ಆರೋಪವೂ ಇದೆ. 2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿ ಹೇಳಿದ್ದರು. ಈಗ ಅತ್ಯಾಚಾರ ಆರೋಪಿ ಸ್ವಾಮೀಜಿಯನ್ನು ಯಾವುದೇ ಕಾರಣಕ್ಕೂ ಬಿಡದಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related Posts

Leave a Reply

Your email address will not be published. Required fields are marked *