Menu

ಹಿನಕಲ್ ಗ್ರಾಮದ  ಸಂಪೂರ್ಣ ಅಭಿವೃದ್ಧಿಗೆ ನಾನು ಬದ್ಧ: ಸಿಎಂ

ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿದ್ದಾರೆ. ಮೈಸೂರಿನ ಹಿನಕಲ್ ನಲ್ಲಿ 9 ಇಂದಿರಾ ಕ್ಯಾಂಟೀನ್ ಗಳನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ. 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು.

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಹೇಳಿದರು.

Related Posts

Leave a Reply

Your email address will not be published. Required fields are marked *