Tuesday, September 02, 2025
Menu

ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್‌ ಅಲರ್ಟ್‌

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಕರಾವಳಿಯ ಜನರು ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇದರಿಂದಾಗಿ ಮರಗಳು ಉರುಳುವ, ವಿದ್ಯುತ್ ಕಂಬಗಳಿಗೆ ಹಾನಿಯಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನಕ್ಕೆ ತೊಡಕಾಗಿದೆ. ರಸ್ತೆಗಳಲ್ಲಿ ನೀರು ತುಂಬಿದ್ದು ಸಂಚಾರಕ್ಕೂ ಪರದಾಡುವಂತಾಗಿದೆ. ಕೃಷಿ ಚಟುವಟಿಕೆಗಳು ಮತ್ತು ಮೀನುಗಾರಿಕೆಗೂ ತೊಂದರೆಯಾಗಿದೆ. ಮುಂದಿನ ಕೆಲವು ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು  ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಮಳೆಯ ಆರ್ಭಟ ಶುರುವಾಗಿದ್ದು, ಮಳೆಯಿಂದಾಗಿ ನಗರದ ಕೆಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಮತ್ತು ರಸ್ತೆಗಳಲ್ಲಿ ನೀರು ತುಂಬಿ ಸಮಸ್ಯೆಯಾಗಿದೆ.

Related Posts

Leave a Reply

Your email address will not be published. Required fields are marked *