Thursday, October 23, 2025
Menu

ಕಟ್ಟಡ ನಿರ್ಮಾಣದ ವೇಳೆ ಮಳೆ ನೀರು ನುಗ್ಗಿ ಇಬ್ಬರು ಕಾರ್ಮಿಕರು ಬಲಿ!

Heavy rains Karnataka

ಕಟ್ಟಡ ನಿರ್ಮಾಣಕ್ಕಾಗಿ ಪಾಯ ಅಗೆಯುತ್ತಿದ್ದಾಗ ಮಳೆ ನೀರು ನುಗ್ಗಿದ್ದರಿಂದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ಸಂಭವಿಸಿದೆ.

ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡದಲ್ಲಿ ಸೋಮವಾರ ರಾತ್ರಿ ಮಳೆ ನೀರು ನುಗ್ಗಿದ್ದರಿಂದ ಪಾಯದಲ್ಲಿನ ಮಣ್ಣು ಕುಸಿದು ಆಂಧ್ರ ಪ್ರದೇಶ ಮೂಲದ ಜೆ.ಶಿವಾ (32) ಮತ್ತು ಮಧುಸುದನ್ ರೆಡ್ಡಿ (58) ಮೃತಪಟ್ಟಿದ್ದಾರೆ.

ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.ಕಟ್ಟಡ ನಿರ್ಮಾಣಕ್ಕಾಗಿ ಕಾರ್ಮಿಕರು ದೊಡ್ಡದಾದ ಗುಂಡಿ ತೆಗೆದಿದ್ದರು. ಈ ಗುಂಡಿಗೆ ಇಳಿದು ಕೆಲಸ ಮಾಡುತ್ತಿದ್ದಾಗ ರಾತ್ರಿ ಅನಿರೀಕ್ಷಿತವಾಗಿ ಮಳೆ ಸುರಿದ ಪರಿಣಾಮ ಗುಂಡಿಯಲ್ಲಿ ಮಳೆ ನೀರು ಸೇರಿ ಮಣ್ಣು ಕುಸಿದಿದೆ.

ಕಾರ್ಮಿಕರು ತಕ್ಷಣವೇ ಹೊರಬರಲು ಯತ್ನಿಸಿದ್ದರು. ಈ ವೇಳೆ, ಇಬ್ಬರ ಮೇಲೆ ಗುಂಡಿಯಲ್ಲಿನ ಮಣ್ಣು ಕುಸಿದಿದೆ. ಪರಿಣಾಮ ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಚಿಂತಾಜನಕ ಸ್ಥಿತಿಯಲ್ಲಿದ್ದ ಮತ್ತೊಬ್ಬನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಆತನು ಸಹ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಈ ಬಗ್ಗೆ ಯಲಹಂಕ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *