Thursday, January 30, 2025
Menu

ಮಂಗಳೂರಲ್ಲಿ ಅಕ್ರಮ ವಾಸವಿದ್ದ ಬಾಂಗ್ಲಾದೇಶಿ ಸೆರೆ

ಮಂಗಳೂರಿನ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್​ (25) ಬಂಧಿತ.

ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದನು. ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಅನರುಲ್​ ಶೇಖ್​​​ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.

ಅನರುಲ್​ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Posts

Leave a Reply

Your email address will not be published. Required fields are marked *