Tuesday, February 03, 2026
Menu

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು.

ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ. ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಂದಿನಿ 8 ವರ್ಷಗಳ ಹಿಂದೆ ಸೂರ್ಯ ಎಂಬಾತನನ್ನು ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ.

ನಂದಿನಿಗೆ ವ್ಯಕ್ತಿಯೊಬ್ಬ ಆಗಾಗ ಕರೆ ಮಾಡಿ ಕಿರಿಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು. ವ್ಯಕ್ತಿಯ ನಿರಂತರ ಕಿರುಕುಳದಿಂದ ಮನನೊಂದಿದ್ದ ನಂದಿನಿ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *