ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರ್ಗೆನ ತಾಂಡಾದಲ್ಲಿ ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಳು ಎಂಬ ಕಾರಣಕ್ಕೆ ಅಪ್ರಾಪ್ತ ವಯಸ್ಕ ಮಗಳನ್ನ ಕೊಲೆ ಮಾಡಿ ತಂದೆ ಪರಾರಿಯಾಗಿರುವ ಪ್ರಕರಣ ನಡೆದಿದೆ.
ಬರ್ಗೆನ ತಾಂಡಾದ ನಿವಾಸಿ ಪರಶುರಾವ ಎಂಬಾತ ತನ್ನ ಮಗಳು ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗುವುದಾಗಿ ತಿಳಿಸಿದ್ದರಿಂದ ಆಕೆಯನ್ನು ಹತ್ಯೆ ಮಾಡಿದ್ದಾನೆ. ಸೋನಿ ಕೊಲೆಯಾದ ದುರ್ದೈವಿ. ಪ್ರಕರಣ ದಾಖಲಿಸಿಕೊಂಡಿರುವ ಸಂತಪೂರ ಪೊಲೀಸರು ಪರಾರಿಯಾದ ತಂದೆಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಸ್ಥಳಕ್ಕೆ ಎಸ್ಪಿ ಪ್ರದೀಪ್ ಕುಂಟಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ರಘುವೀರಸಿಂಗ್ ಠಾಕೂರ್, ಪಿಎಸ್ಐ ನಂದಕುಮಾರ ಮೂಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ತಂದೆಯ ಪತ್ತೆಗೆ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.