Menu

ಮಗನಿಗೆ ಬರ್ತ್‌ ಡೇ ಗಿಫ್ಟ್‌ ಜಗಳ: ಪತ್ನಿ, ಅತ್ತೆಯ ಕೊಲೆಯಲ್ಲಿ ಅಂತ್ಯ

ದೆಹಲಿಯ ರೋಹಿಣಿಯಲ್ಲಿ ಮಗನ ಬರ್ತ್‌ಡೇ ಗಿಫ್ಟ್‌ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿ ಮತ್ತು ಅತ್ತೆಯನ್ನು ಹತ್ಯೆ ಮಾಡಿದ್ದಾನೆ. ಕುಸುಮ್ ಸಿನ್ಹಾ (63) ಮತ್ತು ಮಗಳು ಪ್ರಿಯಾ ಸೆಹಗಲ್ (34) ಕೊಲೆಯಾದವರು. ಯೋಗೇಶ್‌ ಸೆಹಗಲ್ ಕೊಲೆ ಆರೋಪಿ.

ಆ.28 ರಂದು ಮೊಮ್ಮಗ ಚಿರಾಗ್‌ನ ಹುಟ್ಟುಹಬ್ಬವನ್ನು ಆಚರಿಸಲು ಮಗಳು ಪ್ರಿಯಾ ಮನೆಗೆ ಕುಸುಮ್ ಬಂದಿದ್ದಾರೆ. ಮಗನಿಗೆ ಬರ್ತ್‌ಡೇ ಗಿಫ್ಟ್‌ ವಿಷಯದಲ್ಲಿ ಪ್ರಿಯಾ ಮತ್ತು ಆಕೆಯ ಪತಿ ಯೋಗೇಶ್ ನಡುವೆ ಜಗಳ ನಡೆದಿತ್ತು, ಈ ವೇಳೆ ಕುಸುಮ್‌ ಅಲ್ಲೇ ಇದ್ದರು.

ಆ.30 ರಂದು ಮೇಘ ತನ್ನ ತಾಯಿ ಕುಸುಮ್‌ಗೆ ಕರೆ ಮಾಡಿದ್ದಾರೆ. ತಾಯಿ ಕರೆ ಸ್ವೀಕರಿಸಿಲ್ಲ. ಆಗ ಸೋದರಿ ಪ್ರಿಯಾಳ ಮನೆಗೆ ಮೇಘ ಬಂದಿದ್ದಾರೆ. ಮನೆಯಲ್ಲಿ ಯಾರೂ ಇರಲಿಲ್ಲ. ಬಾಗಿಲಿನ ಬಳಿ ರಕ್ತದ ಕಲೆ ಇರುವುದನ್ನು ಕಂಡ ಅವರು, ಬೀಗ ಒಡೆದಾಗ ಕೋಣೆಯೊಳಗೆ ತಾಯಿ ಮತ್ತು ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ಪ್ರಿಯಾಳ ಪತಿ ಯೋಗೇಶ್ ಸೆಹಗಲ್, ನನ್ನ ತಾಯಿ ಮತ್ತು ಸಹೋದರಿ ಇಬ್ಬರನ್ನೂ ಕೊಂದು ಮಕ್ಕಳೊಂದಿಗೆ ಪರಾರಿಯಾಗಿದ್ದಾನೆ ಎಂದು ಮೇಘ ಆರೋಪಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಯೋಗೇಶ್‌ನನ್ನು ಕೆಎನ್‌‌ ಕೆ ಮಾರ್ಗ್ ಪೊಲೀಸರು ಬಂಧಿಸಿದ್ದು, ಆತನ ರಕ್ತದ ಕಲೆಗಳಿರುವ ಬಟ್ಟೆಗಳು ಮತ್ತು ಕೃತ್ಯಕ್ಕೆ ಬಳಸಲಾಗಿರುವ ವಸ್ತುಗಳನ್ನು ಸ್ಥಳದಿಂದ ಪೊಲೀಸರು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *