ಬೆಂಗಳೂರು ಕೆಆರ್ ಪುರಂ ರೈಲ್ವೆ ಸ್ಟೇಷನ್ನಿಂದ ಬುಧವಾರ ಮಧ್ಯರಾತ್ರಿ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ಅಪಹರಿಸಿದ ಕಿರಾತಕರು ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಅಣ್ಣನ ಸೂಚನೆಯಂತೆ ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಳು. ಮಹದೇವಪುರ ಕಡೆಗೆ ಅಣ್ಣನೊಂದಿಗೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ಬೈಕ್ ಅಡ್ಡಗಟ್ಟಿ ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.
ಯುವತಿಯ ಕಿರುಚಾಟ ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಒಬ್ಬ ಆರೋಪಿಯನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ. ಮಹದೇವಪುರ ಪೊಲೀಸರು ಘಟನೆ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.