ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಕಾಮಗಾರಿ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (34) ಮೃತ ಕಾರ್ಮಿಕ. ಕಳೆದ 8 ವರ್ಷದಿಂದ ಈ ಭಾಗದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ. ಬೀರಪ್ಪನಿಗೆ ಹೆಂಡತಿ, ಇಬ್ಬರು ಮಕ್ಕಳು ಇದ್ದಾರೆ. ಬೀರಪ್ಪ ನೂರಾರು ಜನ ಕಾರ್ಮಿಕರಿಗೆ ಆಸರೆಯಾಗಿದ್ದರು, ಎಲ್ಲರಿಗೂ ಕೆಲಸ ಕೊಡಿಸಿದ್ದ ಬೀರಪ್ಪ ಮೃತಪಟ್ಟ ವಿಚಾರ ತಿಳಿದು ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು ಸೇರಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಛತ್ತೀಸ್‌ಗಢದಲ್ಲಿ ವಿದ್ಯುತ್ ತಂತಿ ತಗುಲಿ ಮೂವರ ಸಾವು
ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಕಬಡ್ಡಿ ಪಂದ್ಯದ ವೇಳೆ ಬಿರುಗಾಳಿ ಬೀಸಿದ್ದರಿಂದ ಟೆಂಟ್‌ಗೆ ವಿದ್ಯುತ್ ತಂತಿ ತಗುಲಿ ಮೂವರು ಮೃತಪಟ್ಟಿದ್ದಾರೆ. ಬಡೇರಾಜ್‌ಪುರ ಅಭಿವೃದ್ಧಿ ಬ್ಲಾಕ್‌ನ ರಾವಸ್ವಾಹಿ ಗ್ರಾಮದಲ್ಲಿ ಕಬಡ್ಡಿ ಪಂದ್ಯ ನಡೆಯುತ್ತಿರುವಾಗ ಈ ದುರಂತ ಸಂಭವಿಸಿದೆ. ಆರು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮದಲ್ಲಿ ಶನಿವಾರ ಕಬ್ಬಡಿ ಪಂದ್ಯ ಆಯೋಜಿಸಿ ಪ್ರೇಕ್ಷಕರಿಗಾಗಿ ಟೆಂಟ್ ನಿರ್ಮಿಸಲಾಗಿತ್ತು. ಬಿರುಗಾಳಿ ಬೀ ಟೆಂಟ್‌ನ ಕಬ್ಬಿಣದ ಕಂಬಕ್ಕೆ 11-ಕೆವಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದೆ. ಸ್ಥಳೀಯರು ಗಾಯಗೊಂಡ ಆರು ಮಂದಿಯನ್ನು ವಿಶ್ರಾಂಪುರಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.