Menu

Suicide: ದೊಡ್ಡಬಳ್ಳಾಪುರದಲ್ಲಿ ಪ್ರೀತಿಸಿದಾಕೆಯ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾಗದೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜೂ.13ರಂದು ಈ ಘಟನೆ ನಡೆದಿದ್ದು, ಸೆಲ್ಫಿ ವೀಡಿಯೊ ಮಾಡಿದ ಮಂಜುನಾಥ್,​ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್​, ಆಕೆಗೆ ಬೇರೊಬ್ಬನ‌ ಜೊತೆ ಸಂಬಂಧವಿತ್ತು ಎಂದು ವೀಡಿಯೊದಲ್ಲಿ ಹೇಳಿದ್ದಾನೆ. ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನ್ಯಾಯ ಕೂಡಿಸುವಂತೆ ಕೇಳಿದ್ದಾನೆ.

ಮಾತ್ರೆ ಸೇವಿಸಿದ್ದ ಮಂಜುನಾಥ್​ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೊಬೈಲ್ ಪಾಸ್​ವರ್ಡ್​ ಸಮೇತ ಯುವಕ ಸೆಲ್ಫಿ ವೀಡಿಯೊ ಮಾಡಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆ ಕುಟುಂಬಸ್ಥರು ತಲೆ ಮರೆಸಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *