Saturday, February 22, 2025
Menu

ಯುವಕರ ಅಸಹಜ ಸಾವು: ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಯುವ ಸಮುದಾಯದ ಹಠಾತ್ ಸಾವು ಪ್ರಕರಣಗಳ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಸಿಎಂ ಸಿದ್ದರಾಮಯ್ಯ ಶುಕ್ರವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿ ಈ ಮಾಹಿತಿ ಹಂಚಿಕೊಂಡಿದ್ದು, ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ  ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು ಎಂದು ಸಿಎಂ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಈ ಕುರಿತು ಬರೆದ ಪತ್ರವನ್ನೂ ಉಲ್ಲೇಖಿಸಿರುವ ಸಿಎಂ, ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು” ಎಂದು ಬರೆದಿದ್ದಾರೆ. ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *