ತುಮಕೂರು ಹಿರೇಹಳ್ಳಿ ಸಮೀಪದ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಬಂಕ್ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.
ರಾಜೇಶ್ (25), ದನಂಜಯ್ (27), ಧನುಷ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರೂ ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ಒಂದೇ ಬೈಕ್‌ನಲ್ಲಿ ತುಮಕೂರಿಗೆ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಎಎಸ್ಪಿ ಗೋಪಾಲ್, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.